February 2, 2026

ರೈಲ್ವೆ ಹಳಿ ಮೇಲೆ ಮತ್ತೆ ಭೂ ಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

0
image_editor_output_image1416178622-1723265984458

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದ್ದು ಈ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಆಗಸ್ಟ್ 9 ರಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ.

Leave a Reply

Your email address will not be published. Required fields are marked *

error: Content is protected !!