ಉಪ್ಪಿನಂಗಡಿ: ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಾಟ: ಬುಡೋಳಿಯ ಇಬ್ಬರ ಬಂಧನ
ಉಪ್ಪಿನಂಗಡಿ: ಅಟೋ ರಿಕ್ಷಾದಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಮೂವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ಆ.09 ರಂದು ಬೆಳಿಗ್ಗೆ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸದ್ರಿ ಮಾರ್ಗವಾಗಿ ಅಟೋರಿಕ್ಷಾವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೇ ಮುಂದಕ್ಕೆ ಚಲಾಯಿಸಿ, ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ವಾಹನದಲ್ಲಿದ್ದ ಚಾಲಕ ಮತ್ತು ಹಿಂದಿನ ಸೀಟಿನಲ್ಲಿದ್ದ ವ್ಯಕ್ತಿಯು ವಾಹನದಿಂದ ಇಳಿದು ಓಡಲು ಪ್ರಯತ್ನಿಸಿರುತ್ತಾರೆ. ರಿಕ್ಷಾದಲ್ಲಿದ್ದವರನ್ನು ಹಿಡಿದು ವಿಚಾರಿಸಿದ ವೇಳೆ ಸಮರ್ಪಕವಾದ ಉತ್ತರ ನೀಡದಿರುವ ಹಿನ್ನೆಲೆಯಲ್ಲಿ ವಾಹನದ ದಾಖಲಾತಿಗಳನ್ನು ಹಾಗೂ ವಾಹನವನ್ನು ತಪಾಸಣೆ ನಡೆಸಿದಾಗ, ಅಟೋರಿಕ್ಷಾದಲ್ಲಿ ಸುಮಾರು 18,720 ರೂ ಮೌಲ್ಯದ 9.36 ಗ್ರಾಂ ನಿಷೇದಿತ ಎಂ.ಡಿ.ಎಂ.ಎ ಮಾದಕ ವಸ್ತು ಮತ್ತು 15 ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್ ಗಳು ಪತ್ತೆಯಾಗಿದೆ.
ಅಟೋರಿಕ್ಷಾವನ್ನು ಹಾಗೂ ಆರೋಪಿಗಳಾದ ಮೊಹಮ್ಮದ್ ನಾಸೀರ್ ಗಡಿಯಾರ(24)ವರ್ಷ, : ಏನಾಜೆ ಬುಡೋಳಿಯ ಮಹಮ್ಮದ್ ಆಸೀಫ್ .ಬಿ(21ವ ) ಮತ್ತು ಸಿನಾನ್ ಎಂಬವರುಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 94/2024 ಕಲಂ: U/s 8(c) 22(b) ಎನ್.ಡಿ.ಪಿ.ಎಸ್ ಕಾಯ್ದೆ ಮತ್ತು ಕಲಂ: 3(5) BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ.




