February 2, 2026

ಬ್ರೆಝಿಲ್ ಮೂಲದ ಯುವತಿಯನ್ನು ವಿವಾಹವಾದ ಮಂಗಳೂರಿನ ಯುವಕ

0
image_editor_output_image1928809385-1723269700815.jpg

ಮಂಗಳೂರು : ಪ್ರೀತಿ, ಪ್ರೇಮಕ್ಕೆ ದೇಶ, ಗಡಿಯ ಬೇಲಿ ಇಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿ ಪರಸ್ಪರ ಪ್ರೀತಿಸಿದ್ದು, ಭಾರತೀಯ ಸಂಪ್ರದಾಯದಂತೆ ವಿವಾಹವಾಗಿ ಕರಾವಳಿಯ ಸಂಸ್ಕೃತಿಯನ್ನು ಜಾಗತಿಕವಾಗಿ ಎತ್ತಿಹಿಡಿದಿದ್ದಾರೆ.

ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ತುಳುನಾಡಿನ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್‌ಬಿ ಸಂಪ್ರದಾಯದಂತೆ ಮಂಗಳೂರಿನ ಡಾ. ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನೆರವೇರಿದೆ.

ಕರಂಗಲ್ಪಾಡಿ ನಿವಾಸಿ ಆದಿತ್ಯ 8 ವರ್ಷಗಳ ಹಿಂದೆ ಐಟಿ ಉದ್ಯೋಗ ಕ್ಕಾಗಿ ಬ್ರೆಝಿಲ್‌ಗೆ ತೆರಳಿದ್ದು, 2019ರಲ್ಲಿ ಅವರಿಗೆ ತಾಟಿಯಾನೆ ಪರಿಚಯವಾಗಿತ್ತು. ಬಳಿಕ ಸ್ನೇಹವು ಪ್ರೀತಿಗೆ ತಿರುಗಿತ್ತು.

Leave a Reply

Your email address will not be published. Required fields are marked *

error: Content is protected !!