February 3, 2026

ಕುಂದಾಪುರ: ಖಾಸಗಿ ಬಸ್ಸಿಗೆ ಲಾರಿ ಡಿಕ್ಕಿ: ವಿದ್ಯಾರ್ಥಿಗಳು ಸಹಿತ ಹಲವರಿಗೆ ಗಾಯ

0
image_editor_output_image659936828-1723296001800

ಕುಂದಾಪುರ : ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡ ಘಟನೆ ತಲ್ಲೂರಿನ ಪ್ರವಾಸಿ ಹೋಟೆಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಬೈಂದೂರಿನಿಂದ ಕುಂದಾಪುರದೆಡೆ ತೆರಳುತ್ತಿದ್ದ ಖಾಸಗಿ ಬಸ್ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ್ದು ಈ ವೇಳೆ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಬಸ್ ಹಿಂಬದಿ ಸಂಪೂರ್ಣ ನಜ್ಜುಗುಜ್ಜಾಗಿದ್ದು ಬಸ್ ಒಳಗಿದ್ದ 11 ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಓರ್ವ ವಿದ್ಯಾರ್ಥಿಯ ಕಾಲಿಗೆ ಗಂಭೀರಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿ ದೆ.

Leave a Reply

Your email address will not be published. Required fields are marked *

error: Content is protected !!