ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಮೊಹಮ್ಮದ್ ಮನಾಫ್ ಪ್ರಥಮ
ವಿಟ್ಲ: ಶಿಕ್ಷಣ ಇಲಾಖೆ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಾಳ್ತಿಲ ಇಲ್ಲಿ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು .
14ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದ 50 ಕೆಜಿ ಕೆಳಗಿನ ವಿಭಾಗದ ಕುಮುಟೆ ಸ್ಪರ್ಧೆಯಲ್ಲಿ ವಿಟ್ಲ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿ ಮಹಮ್ಮದ್ ಮನಾಫ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರಿಂದ ಕರಾಟೆ ತರಬೇತಿ ಪಡೆಯುತ್ತಿರುವ ಮಹಮ್ಮದ್ ಮನಾಫ್ ರವರು ಕಂಬಳಬೆಟ್ಟು ಎನ್ ಮೊಹಮ್ಮದ್ ಮತ್ತು ಫಾತಿಮಾರಾ ದಂಪತಿಯ ಪುತ್ರ ನಾಗಿದ್ದಾನೆ.




