March 24, 2026

ಶಿವಮೊಗ್ಗ: ಪೊಲೀಸರಿಗೆ ಮಾಹಿತಿ ನೀಡಿದ್ದ ವ್ಯಕ್ತಿಯ ಹತ್ಯೆ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ತೀರ್ಪು

0
image_editor_output_image-1787231537-1723358187666.jpg

ಶಿವಮೊಗ್ಗ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದ ವ್ಯಕ್ತಿಯನ್ನು ಹತ್ಯೆಗೈದಿದ್ದ ಆರೋಪಿಗಳಿಗೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.

ಶಿಕ್ಷೆಗೆ ಗುರಿಯಾದ ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ. ಅಪರಾಧಿಗಳು 2021ರಲ್ಲಿ, ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಡುತ್ತಾನೆ ಎಂಬ ಕಾರಣಕ್ಕೆ ಇರ್ಫಾನ್ ಎಂಬಾತನನ್ನು ಟಿಪ್ಪು ನಗರದಲ್ಲಿ ಮಾರಕಾಸ್ತ್ರಗಳಿಂದ ಚುಚ್ಚಿ ಹತ್ಯೆಗೈದಿದ್ದರು.

Leave a Reply

Your email address will not be published. Required fields are marked *

error: Content is protected !!