March 24, 2026

ಈ ಬಾರಿ ಶಿವಮೊಗ್ಗದಲ್ಲಿ ಕಂಬಳ ಆಯೋಜನೆ

0
image_editor_output_image-499921716-1723362840194.jpg

ಮೂಡುಬಿದಿರೆ: ಬೆಂಗಳೂರು ಬಳಿಕ ಇದೀಗ ಮಲೆನಾಡಿಗೂ ಕರಾವಳಿಯ ಕಂಬಳ ಕಾಲಿಡಲಿದ್ದು, ಈ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜನೆ ಮಾಡಲು ದ.ಕ. ಸೇರಿದ ಜಿಲ್ಲಾ ಕಂಬಳ ಸಮಿತಿ ಶನಿವಾರ ಮೂಡುಬಿದಿರೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ, ಬೆಂಗಳೂರಿನಲ್ಲಿ ಮೊದಲ ಕಂಬಳ ಅಕ್ಟೋಬರ್ 26ರಂದು ನಡೆಯಲಿದೆ. ಕೊನೆಯ ಕಂಬಳವನ್ನು 2025ರ ಎಪ್ರಿಲ್ 19ರಂದು ಶಿವಮೊಗ್ಗದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕಂಬಳ ಋತುವಿನಲ್ಲಿ ಒಟ್ಟು 26 ಕಂಬಳಗಳನ್ನು ನಡೆಸಲಾಗುವುದು, ಮಂಗಳೂರಿನ ಪಿಲಿಕುಳ ಕಂಬಳಕ್ಕೆ ಮತ್ತೆ ಚಾಲನೆ ನೀಡಲಾಗುವುದು’ ಎಂದರು.

Leave a Reply

Your email address will not be published. Required fields are marked *

error: Content is protected !!