March 24, 2026

ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೊ ಚಿತ್ರೀಕರಣ: ಆರೋಪಿಯ ಬಂಧನ

0
image_editor_output_image340263688-1723441009505.jpg

ಬೆಂಗಳೂರು : ಮಹಿಳೆಯರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕಿರಾತಕ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿಯಾಗಿದ್ದಾನೆ. ಕಾಫಿ ಶಾಪ್ನಲ್ಲಿ ಕಾಫಿ ಮೇಕರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಮನೋಜ್, ಶನಿವಾರ ಬೆಳಗ್ಗೆ ಮಹಿಳೆಯರ ಶೌಚಾಲಯಕ್ಕೆ ಹೋಗಿದ್ದಾನೆ.

ಅಲ್ಲಿ ಕಸದ ಬುಟ್ಟಿಗೆ ಹೋಲ್ ಮಾಡಿದ್ದಾನೆ. ನಂತರ ಮೊಬೈಲ್ ಅನ್ನು ಫ್ಲೈಟ್ ಮೂಡ್ಗೆ ಹಾಕಿ ವಿಡಿಯೋ ಚಿತ್ರಕರಣಕ್ಕೆ ಇರಿಸಿ, ಹೊರ ಬಂದು ಯಥಾಪ್ರಕಾರ ತನ್ನ ಕೆಲಸದಲ್ಲಿ ತೊಡಗಿಕೊಂಡಿದ್ದಾನೆ. ನಂತರ ಶೌಚಾಲಯಕ್ಕೆ ಹೋದ ಮಹಿಳೆಯೊಬ್ಬರು ಮೊಬೈಲ್ ಇರುವುದನ್ನು ಗಮನಿಸಿದ್ದಾರೆ. ಅವರು ತಕ್ಷಣವೇ ಪೊಲೀಸರಿಗೆ ವಿಚಾರ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಸದಾಶಿವನಗರ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿ ಕಿರಾತಕ ಮನೋಜನನ್ನು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!