ದೇವಸ್ಥಾನ ಕಾರ್ಯಕ್ರಮದಲ್ಲಿ ಕಾಲ್ತುಳಿತ: 7 ಮಂದಿ ಸಾವು
ಪಾಟ್ನಾ: ಕೆಲ ದಿನಗಳ ಹಿಂದೆಯಷ್ಟೇ ಹತ್ರಾಸ್‌ನ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ ಹತ್ತಾರು ಮಂದಿ ಸಾವನ್ನಪ್ಪಿದ್ದರು. ಅದೇ ರೀತಿಯ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ ಜಿಹಾನಾಬಾದ್ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಲಘು ಲಾಠಿ ಪ್ರಹಾರ ಮಾಡಿದ ಪರಿಣಾಮ ಕಾಲ್ತುಳಿತ ಉಂಟಾಗಿ 3 ಮಹಿಳೆಯರು ಸೇರಿ 7 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.




