ಪ್ಯಾರಿಸ್ ಒಲಿಂಪಿಕ್ಸ್ ವರ್ಣರಂಜಿತ ತೆರೆ: ಚೀನಾವನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆದ ಅಮೆರಿಕಾ
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 40 ಚಿನ್ನ, 44 ಬೆಳ್ಳಿ ಮತ್ತು 42 ಕಂಚು ಸೇರಿದಂತೆ 126 ಪದಕಗಳೊಂದಿಗೆ ಯುನೈಟೆಡ್ ಸ್ಟೇಟ್ಸ್ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಚೀನಾ ತನ್ನ ಒಲಿಂಪಿಕ್ ಅಭಿಯಾನವನ್ನು 40 ಚಿನ್ನದ ಪದಕಗಳೊಂದಿಗೆ ಒಟ್ಟು 91 ಪದಕಗಳೊಂದಿಗೆ ಕೊನೆಗೊಳಿಸಿತು. ಒಲಿಂಪಿಕ್ಸ್‌ನುದ್ದಕ್ಕೂ ಅಮೆರಿಕ ಮತ್ತು ಚೀನಾದಂತಹ ಎರಡು ಕ್ರೀಡಾ ಮಹಾಶಕ್ತಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸ್ಪರ್ಧೆಯ ಕೊನೆಯ ದಿನದಂದು ಅಮೆರಿಕಾ ತನ್ನ ಸಾಂಪ್ರದಾಯಿಕ ಎದುರಾಳಿ ಚೀನಾವನ್ನು ಒಲಿಂಪಿಕ್ಸ್‌ನಲ್ಲಿ ಅಲ್ಪ ಅಂತರದಿಂದ ಹಿಂದೆ ಹಾಕಿತು.
ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಬ್ಯಾಸ್ಕೆಟ್‌ಬಾಲ್‌ನ ಅಂತಿಮ ಪಂದ್ಯದಲ್ಲಿ ಆತಿಥೇಯ ರಾಷ್ಟ್ರ ಫ್ರಾನ್ಸ್ ವಿರುದ್ಧ ಯುನೈಟೆಡ್ ಸ್ಟೇಟ್ಸ್ 67-66 ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಬಾಸ್ಕೆಟ್‌ಬಾಲ್ ತಂಡ ಚಿನ್ನದ ಪದಕ ಗೆದ್ದುಕೊಂಡಿತು. ಇದರೊಂದಿಗೆ ಅಮೆರಿಕ ಸತತ ನಾಲ್ಕನೇ ಒಲಿಂಪಿಕ್ಸ್‌ನಲ್ಲಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.





