ಲಂಚವಾಗಿ 5 ಕೆ.ಜಿ. ಆಲುಗಡ್ಡೆ ಬೇಡಿಕೆಯಿಟ್ಟಿದ್ದ ಸಬ್‌ಇನ್‌ಸ್ಪೆಕ್ಟರ್ ಅಮಾನತು
ಲಕ್ನೋ: ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದ ಸಬ್‌ಇನ್‌ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿ ನಡೆದಿದೆ.
ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪೊಲೀಸ್ ಅಧಿಕಾರಿ ರಾಮ್ ಕೃಪಾಲ್ ಸಿಂಗ್ ಲಂಚ ಕೇಳಿರುವ ಆರೋಪದ ಆಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಲಂಚಕ್ಕಾಗಿ ‘ಆಲೂಗಡ್ಡೆ’ ಎಂಬ ಪದವನ್ನು ಕೋಡ್ ಆಗಿ ಬಳಸಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ಇ





