ಮಲಗಿದ್ದ ಸ್ನೇಹಿತನ ಕೊಲೆ
ತುಮಕೂರು: ರಾಜ್ಯದಲ್ಲಿ ಶೆಡ್‌ಗಳು ಕೊಲೆ ಮಾಡುವ ತಾಣಗಳಾಗಿ ಮಾರ್ಪಾಡಾಗುತ್ತಿವೆ. ಇತ್ತೀಚೆಗೆ ನಟ ದರ್ಶನ್ ಸೇರಿ ಸಂಗಡಿಗರು ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಿದ್ದರು. ಇದರ ಬೆನ್ನಲ್ಲಿಯೇ ತುಮಕೂರಿನ ಶೆಡ್ ಒಂದರಲ್ಲಿ ಮಲಗಿದ್ದ ಸ್ನೇಹಿತನನ್ನು ಕೊಲೆ ಮಾಡಿದ ದಾರುಣ ಘಟನೆ ನಡೆದಿದೆ.
ತುಮಕೂರಿನಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರು ತಂಗಲು ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಅಗ್ರಹಾರದಲ್ಲಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ಗ್ರಾಮ ನಿವಾಸಿ ರವಿ (40) ಎಮದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಕೆಲಸ ಮಾಡಿಕೊಂಡಿದ್ದ ರವಿ ಅವರನ್ನು ಆತನ ಸ್ನೇಹಿತ ಶಿವಕುಮಾರ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿ





