ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಅರುಣ್ ಕುಮಾರ್ ಪುತ್ತಿಲ
ವಿಟ್ಲ ಕುದ್ದುಪದವು ಸಮೀಪದಲ್ಲಿರುವ ಅಂಗಡಿಯೊಂದಕ್ಕೆ ಬಾಲಕಿ ತೆರಳಿದ ವೇಳೆ ಅಂಗಡಿಯ ಮಾಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಠಾಣೆಗೆ ಭೇಟಿ ನೀಡಿದ್ದಾರೆ.





