ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನ
ಸುರತ್ಕಲ್ : ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.
ಅಲ್ಲದೆ, ಸ್ಥಳೀಯ ಹಲವು ಸಂಘ ಸಂಸ್ಥೆಗಳಲ್ಲಿ ವಿವಿಧ ಪದವಿಗಳನ್ನು ಅಲಂಕರಿಸಿದ್ದರು. ಸುರತ್ಕಲ್ ಟೋಲ್ ಗೇಟ್ ತೆರವಿನ ಧರಣಿಯಲ್ಲಿ ಭಾಗವಹಿಸಿ ಟೋಲ್ ತೆರವಿಗೆ ಮಹತ್ವದ ಕೊಡುಗೆ ನೀಡಿದ್ದರು.





