February 3, 2026

ಮಂಗಳೂರು: ಪಿ.ಜಿಯಲ್ಲಿಟ್ಟಿದ್ದ 2 ಲ್ಯಾಪ್‌ಟಾಪ್‌ ಸಹಿತ ಸೊತ್ತುಗಳ ಕಳವು

0
image_editor_output_image-292976407-1723530425249.jpg

ಮಂಗಳೂರು: ನಗರದ ಪಿಜಿಯೊಂದರಿಂದ 2 ಲ್ಯಾಪ್‌ಟಾಪ್‌ಗಳು, ಹಣ ಮತ್ತು ಎಟಿಎಂ ಕಾರ್ಡನ್ನು ಕಳವು ಮಾಡಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಯೂರ್ ನಾಯ್ಕ ಮತ್ತು ಚರಣ್ ಎಂಬವರು ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಕಂಪೆನಿಯ ಕೆಲಸ ಮುಗಿಸಿ ಬೇರೆ ಬ್ಯಾಗ್‌ಗಳಲ್ಲಿ 2 ಲ್ಯಾಪ್‌ಟಾಪ್‌ಗಳನ್ನಿಟ್ಟು ಮಲಗಿದ್ದರು.

ಮರುದಿನ ಬೆಳಗ್ಗೆ 8 ಗಂಟೆಗೆ ಎದ್ದು ನೋಡಿದಾಗ ಲ್ಯಾಪ್‌ಟಾಪ್‌ಗಳು, 800 ರೂ., ಎಟಿಎಂ ಕಾರ್ಡ್ ಸಹಿತ ಅಂದಾಜು 2,11,500 ರೂ. ಮೌಲ್ಯದ ಸೊತ್ತುಗಳು ಕಳವಾಗಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!