ಫಲ್ಗುಣಿ ನದಿಗೆ ನಿರ್ಮಿಸಿರುವ ಕೂಳೂರು ಸೇತುವೆಯಲ್ಲಿ ಬಿರುಕು
ಮಂಗಳೂರು: ಕರ್ನಾಟಕ – ಗೋವಾ ರಾಜ್ಯ ಸಂಪರ್ಕಸುವ ಕಾಳಿ ನದಿ ಸೇತುವೆ ಕುಸಿದ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ 146ರಲ್ಲಿರುವ ಮಂಗಳೂರು ನಗರಕ್ಕೆ ಪ್ರವೇಶ ಕಲ್ಪಿಸುವ ಕೂಳೂರು ಸೇತುವೆ ಗುಣಮಟ್ಟದ ಬಗ್ಗೆ ಚರ್ಚೆ ಆರಂಭವಾಗಿದೆ.
ಸುಮಾರು ಏಳು ದಶಕಗಳ ಹಿಂದೆ ನಿರ್ಮಿಸಿದ್ದ ಕೂಳೂರು ಸೇತುವೆಯನ್ನು 1952ರಲ್ಲಿ ಮದ್ರಾಸ್ ಪ್ರಾಂತ್ಯದ ಸಚಿವ ಎನ್. ರಂಗರೆಡ್ಡಿ ಉದ್ಘಾಟಿಸಿದ್ದರು ಎಂದು ದಾಖಲೆಗಳು ಹೇಳುತ್ತವೆ. ಕೂಳೂರು ಸೇತುವೆ ಹಳೆಯದಾಗಿರುವ ಕಾರಣ ಅದರ ಪಕ್ಕದಲ್ಲೇ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಗಿ ವರ್ಷಗಳು ಕಳೆದರೂ, ಅದು ಆಮೆಗತಿಯಲ್ಲಿ ಸಾಗುತ್ತಿದೆ. ಹಳೆಯ ಸೇತುವೆ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತವೆ.
ಫಲ್ಗುಣಿ ನದಿಗೆ ನಿರ್ಮಿಸಿರುವ ಕೂಳೂರು ಸೇತುವೆಯಲ್ಲಿ ಭಾರಿ ವಾಹನ ಸಂಚಾರ ನಿಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 2018ರಲ್ಲಿ ಜಿಲ್ಲಾಡಳಿತಕ್ಕೆ ವರದಿ ನೀಡಿತ್ತು. ಹೈದರಾಬಾದ್‌ನ ಮೆ. ಆರ್ವಿ ಅಸೋಸಿಯೇಟ್ಸ್ ಏಜೆನ್ಸಿಯು ಸೇತುವೆ ತಪಾಸಣೆ ನಡೆಸಿತ್ತು.