ಅಪ್ರಾಪ್ತೆಯನ್ನು ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ, ವಿಡಿಯೋ ವೈರಲ್ ಮಾಡಿದ್ದ ಕಿಡಿಗೇಡಿಯ ಬಂಧನ
ಧಾರವಾಡ: ಅಪ್ರಾಪ್ತೆಯನ್ನು ಲಾಡ್ಜ್ ಗೆ ಕರೆದೊಯ್ದ ಕಿಡಿಗೇಡಿ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಬಳಿಕ ಆ ವಿಡಿಯೊವನ್ನು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಕಿಡಿಗೇಡಿ ಹರಿಬಿಟ್ಟಿದ್ದಾನೆ. ಗ್ರೂಪಲ್ಲಿ ಬಂದ ವಿಡಿಯೋವನ್ನು ಹಲವರು ಬೇರೆ ಗ್ರೂಪ್‌ಗೆ ಶೇರ್ ಮಾಡಿದ್ದಾರೆ. ಮಾಹಿತಿ ಪಡೆದ ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಈ ಕಿಡಿಗೇಡಿಯನ್ನು ಬಂಧಿಸಿ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲು ಮಾಡಿದ್ದಾರೆ. ಜತೆಗೆ ಬೇರೆ ಬೇರೆ ಗ್ರೂಪ್‌ನಲ್ಲಿ ವಿಡಿಯೋ ಶೇರ್ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.