ವಿಸ್ಡಮ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬುಡೋಳಿ-ಗಡಿಯಾರ ಇದರ ಮಂತ್ರಿಮಂಡಲ ರಚನೆ, ಪದಗ್ರಹಣ.
ವಿಟ್ಲ. ಇಲ್ಲಿನ ಬುಡೋಳಿ ಸಮೀಪದ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿರುವ ಪ್ರತಿಷ್ಠಿತ ವಿಸ್ಡಮ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಮಂತ್ರಿ ಮಂಡಲದ ರಚನೆ ಹಾಗೂ ಪದಗ್ರಹಣ ಕಾರ್ಯಕ್ರಮ ಶಾಲೆಯ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಶಿಕ್ಷಕ ಇಬ್ರಾಹಿಂ ಒ.ಪ್ರಸ್ತಾವನಾ ಭಾಷಣ ಮಾಡಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಆರಕ್ಷಕ ಉಪನಿರೀಕ್ಷಕ ತಿಮ್ಮಯ್ಯ ಅವರು ವಿದ್ಯಾರ್ಥಿಗಳಿಗೆ ಬ್ಯಾಜ್ ವಿತರಿಸಿ, ವಿದ್ಯಾರ್ಥಿಗಳು ಮುಂದೆ, ದೇಶದ ಪ್ರಜ್ಞಾವಂತ ನಾಗರಿಕರಾಗಿ ಬೆಳೆಯುವಲ್ಲಿ ತಮ್ಮ ಹೊಣೆಗಾರಿಕೆಗಳ ಬಗ್ಗೆ ತಿಳಿ ಹೇಳಿದರು. ನಂತರ ಮಾತನಾಡಿದ
ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಮನೋಜ್ ಕುಮಾರ್ ರವರು, ಮೋಟಾರು ವಾಹನ ಕಾಯ್ದೆಯ ನಿಯಮಾವಳಿಗಳ ಬಗ್ಗೆ ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು ಹಾಗೂ ಪೋಕ್ಸೊ ಕಾಯ್ದೆ ಸಂಬಂಧಿಸಿದಂತೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ ಅಬೂಬಕರ್ ಅನಿಲಕಟ್ಟೆ, ಪುಸ್ತಕಗಳನ್ನು ಓದಿ ಜ್ಞಾನವನ್ನು ವೃಧ್ದಿಸುವುದರ ಜೊತೆಗೆ ಸಾಹಿತ್ಯಾಸಕ್ತಿಯನ್ನು ಬೆಳೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಿಕ್ಷಕಿ ಮುಬೀನ ಸ್ವಾಗತಿಸಿದರು. ಶಿಕ್ಷಕಿ ಸಿನಾನ ಕಾರ್ಯಕ್ರಮವನ್ನು ನಿರೂಪಿಸಿದರು, ಶಿಕ್ಷಕಿ ಸ್ವಾತಿ ವಂದಿಸಿದರು