ಕಾರು ಪಲ್ಟಿ: ಚಾಲಕ ಸ್ಥಳದಲ್ಲಿಯೇ ಸಾವು
ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಕೂತನೂರು ಬಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಆ.14ರ ಬುಧವಾರ ನಡೆದಿದೆ.
ಕನ್ನೇಗಾಲ ಗ್ರಾಮದ ಚಂದ್ರು(31) ಮೃತ ವ್ಯಕ್ತಿ. ಕಾರಿನಲ್ಲಿದ್ದ ಕೃಷ್ಣಮೂರ್ತಿ ಹಾಗೂ ಕೃಷ್ಣ ಎಂಬ ಇಬ್ಬರಿಗೆ ಗಾಯಾಗಳಾಗಿದೆ.
ಮೂವರು ಸ್ನೇಹಿತರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೂತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಈ ವೇಳೆ ಚಾಲಕ ಚಂದ್ರು ಅವರ ತಲೆಗೆ ತೀವ್ರ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.





