78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ
ಬೆಂಗಳೂರು: 78 ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಧ್ವಜಾರೋಹಣ ಮಾಡಿದ್ದಾರೆ. ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಮುಖ್ಯಮಂತ್ರಿಗಳು ಸ್ವಾತಂತ್ರ್ಯ ಸಂಭ್ರಮದ ಸಂದೇಶ ನೀಡಿದ್ದಾರೆ.
ಧ್ವಜಾರೋಹಣ ನೆರವೇರಿಸಿದ ಬಳಿಕ ಗೌರವ ರಕ್ಷೆ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಅಭಿವೃದ್ದಿ ವಿಚಾರದಲ್ಲಿ ಹಲವು ಮಹತ್ತರ ಹೆಜ್ಜೆಗಳನ್ನು ಇರಿಸಲಾಗಿದೆ. ಸ್ವತಂತ್ರ್ಯ ಭಾರತದಲ್ಲಿ ಎಲ್ಲರೂ ಕೂಡಾ ಜೊತೆಯಾಗಿ ಸಾಗಬೇಕಾಗಿದ್ದು,ಅದಕ್ಕೆ ಕೇಂದ್ರದ ಸಹಕಾರ ಪ್ರಮುಖವಾಗಿದೆ ಎಂದು ಹೇಳಿದ್ದಾರೆ.
ಮೈತ್ರಿ ಯೋಜನೆಯಡಿ ಪಿಂಚಣಿ ಮೊತ್ತ ಹೆಚ್ಚಿಸಲಾಗಿದೆ. ಹಾಲು ಉತ್ಪಾದಕರ ಖಾತೆಗೆ ಪ್ರೋತ್ಸಾಹ ಹಣ ನೀಡಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ 463.11 ಕೋಟಿ ನೀಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ ಆಗಿದೆ. ಈವರೆಗೆ 25,258 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡೋದಾಗಿ ಘೋಷಿಸಲಾಗಿತ್ತು. ಆದರೆ ಕೇಂದ್ರದ ಅಸಹಕಾರದಿಂದ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗಿದೆ. ಈವರೆಗೆ 4.08 ಕೋಟಿ ಫಲಾನುಭವಿಗಳಿಗೆ 7,763 ಕೋಟಿ ನೆರವು. ಉಚಿತವಾಗಿ 200 ಯೂನಿಟ್ವರೆಗೆ ನೀಡುವ ಗೃಹಜ್ಯೋತಿ ಯೋಜನೆಯಡಿ ರಾಜ್ಯದ 1.60 ಕೋಟಿ ಕುಟುಂಬಗಳು ಈ ಯೋಜನೆ ಪಡೆದುಕೊಳ್ಳುತ್ತಿವೆ. ಶಕ್ತಿ 8,844 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯುವನಿಧಿ ಯೋಜನೆಯಡಿ 1.31 ಲಕ್ಷ ಪದವಿ/ಡಿಪ್ಲೊಮಾ ನಿರುದ್ಯೋಗಗಳಿಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ 91 ಕೋಟಿ ರೂ. ಗಳನ್ನ ಭರಿಸಲಾಗಿದೆ. ಈ ಯೋಜನೆಗಳು ಮುಂದುವರಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.





