ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ
ನವದೆಹಲಿ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ ನೀಡಲಾಗುವ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕರ್ನಾಟಕದ ರಾಜ್ಯದ 19 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ M(ಎಡಿಜಿಪಿ, ಐಎಸ್ಡಿ, ಬೆಂಗಳೂರು) ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಉಳಿದ 18 ಪೊಲೀಸ್ ಅಧಿಕಾರಿಗಳು ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ.





