February 2, 2026

ಕೌಟುಂಬಿಕ ಕಲಹ: ಪತಿಯಿಂದಲೇ ಪತ್ನಿಯ ಹತ್ಯೆ

0
image_editor_output_image146985000-1723781017104.jpg

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿ ಹತ್ಯೆಯಾದ ಘಟನೆ ಮಾಗಡಿ ತಾಲೂಕಿನ ಹೂಜಗಲ್ಲು ಬೆಟ್ಟದಲ್ಲಿ ನಡೆದಿದೆ.

ದಿವ್ಯಾ (32) ಗಂಡನಿಂದಲೇ ಕೊಲೆಯಾದ ಮಹಿಳೆ. ಉಮೇಶ್ ಪತ್ನಿಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ವಿಚ್ಛೇದನ ಪಡೆಯಲು ದಂಪತಿ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಮಾಗಡಿ ಕೋರ್ಟ್‌ಗೆ ದಂಪತಿ ಹಾಜರಾಗಿದ್ದರು.

ಬಳಿಕ ಡ್ರಾಮಾ ಮಾಡಿ ಪತ್ನಿಯನ್ನು ದೇವಸ್ಥಾನಕ್ಕೆಂದು ಹೂಜಗಲ್ಲು ಬೆಟ್ಟಕ್ಕೆ ಕರೆದೊಯ್ದ ಉಮೇಶ್, ಪೂಜೆ ಮಾಡುವ ವೇಳೆ ಪತ್ನಿ ದಿವ್ಯಾಳ ಹತ್ಯೆ ಮಾಡಿದ್ದಾನೆ. ಶವವನ್ನು ಚೀಲೂರು ಅರಣ್ಯ ಪ್ರದೇಶದಲ್ಲಿ ಎಸೆದು ಆರೋಪಿ ಎಸ್ಕೇಪ್ ಆಗಿದ್ದಾನೆ. ಈ ಪ್ರಕರಣ ಸಂಬಂಧ ಐವರ ಮೇಲೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!