February 1, 2026

ಮಣಿಪಾಲ: ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು

0
image_editor_output_image-1059441886-1723877315948.jpg

ಮಣಿಪಾಲ: ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ.

ಚಿಕ್ಕಮಗಳೂರು ಮೂಲದ ಆನಂದ(37) ಸಾವನ್ನಪ್ಪಿರುವರು. ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಚಿಕಿತ್ಸೆಗೆಂದು ಕರೆದುಕೊಂಡು ಬಂದಿದ್ದ ಅವರು ಅವರನ್ನು ಆಸ್ಪತ್ರೆಗೆ ದಾಖಲಿಸಿ ರಾತ್ರಿ ವೇಳೆ ಕಾರಿನೊಳಗೆ ಮಲಗಿಕೊಂಡಿದ್ದರು.

ಕಾರಿನ ಗ್ಲಾಸ್‌ ಅನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಮಲಗಿದ್ದ ಕಾರಣ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Leave a Reply

Your email address will not be published. Required fields are marked *

error: Content is protected !!