ಬಂಟ್ವಾಳ: ಅಡ್ಡೂರು ಸೇತುವೆ ಶಿಥಿಲ: ವಾಹನ ಸಂಚಾರ ನಿಷೇಧ
ಬಂಟ್ವಾಳ: ಪೊಳಲಿ ಸಮೀಪದ ಅಡ್ಡೂರು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಕಟೀಲು, ಪೊಳಲಿ ಕ್ಷೇತ್ರದ ಭಕ್ತರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಬಸ್ಸು ಸೇವೆ ಅಥವಾ ಪರ್ಯಾಯ ವ್ಯವಸ್ಥೆ ಕೈಗೊಳ್ಳುವ ನಿಟ್ಟಿನಲ್ಲಿ ಆರ್.ಟಿ.ಒ. ಹಾಗೂ ಪಂಚಾಯತ್‌ನವರ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭರವಸೆ ನೀಡಿದರು.
ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್ ಶೆಟ್ಟಿ ಅವರೊಂದಿಗೆ ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಸಿ. ಜತೆ ಚರ್ಚೆ ನಡೆಸಿದರು.




