February 2, 2026

ಕಾಸರಗೋಡು: ನಿಯಂತ್ರಣ ತಪ್ಪಿ ಕಾರು ಪಲ್ಟಿ: ವಿದ್ಯಾರ್ಥಿ ಸ್ಥಳದಲ್ಲಿ ಮೃತ್ಯು

0
n6269783791723897595143e354575bc966b5b99d9dcde1c2dea8b1f3832593adf886f009225d94bfa4c7ed.jpg

ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರಿಬುದ್ದೀನ್ (21) ಮೃತರು. ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದು ಧರೆಗೆ ಬಡಿದಿದೆ. ರಾಜಾಪುರ ಠಾಣೆ ಪೊಲೀಸರು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!