February 1, 2026

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಕರಣ: ಹೈಕೋರ್ಟ್‌ನಲ್ಲಿ ಕೇವಿಯೆಟ್ ಸಲ್ಲಿಕೆ

0
KarnatakaHC_vb_49.jpeg

ಬೆಂಗಳೂರು: ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಅವರು‌ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಕೇವಿಯೆಟ್ ಅರ್ಜಿಯೊಂದನ್ನು ದಾಖಲಿಸಲಾಗಿದೆ.

ಈ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಶನಿವಾರ ಕೇವಿಯೆಟ್ ಸಲ್ಲಿಸಿದ್ದಾರೆ.

ರಾಜ್ಯಪಾಲರು ಸಿಎಂ ವಿರುದ್ಧದ ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರೆ, ನಮ್ಮ ವಾದ ಆಲಿಸದೆ ಯಾವುದೇ ಆದೇಶ ನೀಡಬಾರದು ಎಂದು ಕೆವಿಯಟ್‌ನಲ್ಲಿ ಮನವಿ ಮಾಡಿದ್ದಾರೆ.

ಈಗಾಗಲೇ ಮುಡಾ ಹಗರಣವನ್ನು ತನಿಖೆಗೆ ಒಳಪಡಿಸಲು ಆದೇಶಿಸಬೇಕು ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರುವೊಂದನ್ನು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!