February 1, 2026

ವಿಟ್ಲ: ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣ: ಪ್ರಕರಣ ದಾಖಲು-ಹುಡುಗಿ ವಿಚಾರ ಘಟನೆ ಕಾರಣ!

0
IMG-20220615-WA0046

ವಿಟ್ಲ: ಹುಡುಗಿ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಓರ್ವ ಇನ್ನೊಬ್ಬನಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉರಿಮಜಲು ಜಂಕ್ಷನ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್(೩೮) ಇರಿತದಿಂದ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಆರೋಪಿಯಾಗಿದ್ದು, ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶರೀಫ್ ಉರಿಮಜಲು ಜಂಕ್ಷನ್‌ಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಹಾಫೀಲ್ ಶರೀಪ್ ಜತೆ ಮಾತಿಗೆ ಇಳಿದಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಆರೋಪಿ ಶರೀಫ್ ಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಹುಡುಗಿ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದು ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!