March 24, 2026

ಖ್ಯಾತ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು

0
image_editor_output_image277324421-1723992141618.jpg

ಕೊಚ್ಚಿ : ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋಹನ್ಲಾಲ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಕೊಚ್ಚಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಆಸ್ಪತ್ರೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಮೋಹನ್ಲಾಲ್ ಅವರಿಗೆ ತೀವ್ರ ಜ್ವರ, ಮೈ, ಕೈ ನೋವು ಜೊತೆಗೆ ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಗುಜರಾತ್ಗೆ ತೆರಳಿದ್ದ ಮೋಹನ್ಲಾಲ್ ಚಿತ್ರೀಕರಣ ಮುಗಿಸಿಕೊಂಡು ಇತ್ತೀಚೆಗಷ್ಟೆ ಕೊಚ್ಚಿಗೆ ವಾಪಸ್ಸಾಗಿದ್ದರು. ವಾಪಸ್ಸಾದ ಕೂಡಲೇ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಜ್ವರ ಏರುತ್ತಾ ಸಾಗಿದ್ದು, ಇಂದು(ಆ.18) ಬೆಳಿಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಕೊಚ್ಚಿಯ ಅಮೃತಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋಹನ್ಲಾಲ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಅಮೃತಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆ ಆಡಳಿತ ಮಂಡಳಿ, ‘65 ವರ್ಷ ವಯಸ್ಸಿನ ಮೋಹನ್ಲಾಲ್ ಅವರಿಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮೋಹನ್ಲಾಲ್ ಅವರಿಗೆ ತೀವ್ರ ಜ್ವರ, ಉಸಿರಾಟದಲ್ಲಿ ಸಮಸ್ಯೆ ಮತ್ತು ಮಾಂಸಖಂಡಗಳಲ್ಲಿ ನೋವು ಇರುವುದಾಗಿ ತಿಳಿದು ಬಂದಿದೆ. ಮೋಹನ್ಲಾಲ್ ಅವರಿಗೆ ಶ್ವಾಸಕೋಶದ ಸೋಂಕು ಆಗಿರುವ ಅನುಮಾನ ಇದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐದು ದಿನಗಳ ಕಾಲ ಔಷಧಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಜೊತೆಗೆ ಐದು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ’ ಎಂದು ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!