ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಖಂಡನೆ: ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಪಾದಯಾತ್ರೆ
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಿಂದ ಸೋಮವಾರ (ಆ.19) ಮಂಗಳೂರಿನ ಲೇಡಿಹಿಲ್ ನಿಂದ ಲಾಲ್ ಭಾಗ್ ವರೆಗೆ ಪಾದಯಾತ್ರೆ ನಡೆಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ರಮಾನಾಥ ರೈ ಮೊದಲಾದವರು ಭಾಗಿಯಾಗಿದ್ದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಸರಕಾರದ ವಿರುದ್ದ, ರಾಜ್ಯಪಾಲರಿಗೆ ಧಿಕ್ಕಾರ ಘೋಷಣೆ ಕೂಗಲಾಯಿತು. ಲಾಲ್ ಭಾಗ್ ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದೆ. ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.




