ವಿದ್ಯಾರ್ಥಿನಿಯ ಅತ್ಯಾಚಾರ ಮಾಡಿದ ಕೊರಿಯೋಗ್ರಾಫರ್ ಬಂಧನ
ಬೆಂಗಳೂರು: ಡ್ರಾಪ್ ಕೇಳಿದ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಕೊರಿಯೋಗ್ರಾಫರ್ ಎಂದು ತಿಳಿದು ಬಂದಿದೆ.
ಕೋರಮಂಗಲ ಪಬ್ಗೆ ಪಾರ್ಟಿಗೆ ಬಂದಿದ್ದ. ಮನೆಗೆ ತೆರಳುವಾಗ ಯುವತಿ ಡ್ರಾಪ್ ಕೇಳಿದ್ದಾಳೆ. ಯುವತಿ ಕೂಡ ಕೋರಮಂಗಲದ ಪಬ್ನಲ್ಲಿ ಪಾರ್ಟಿ ಮುಗಿಸಿ ಹೊರಟಿದ್ದಳು. ಇನ್ನು ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ. ಆರೋಪಿ ಅತ್ಯಾಚಾರದ ವೇಳೆ ಯುವತಿಯ ಬಟ್ಟೆ ಹರಿದು ದುಷ್ಕೃತ್ಯ ಮೆರೆದಿದ್ದಾನೆ. ಈ ವೇಳೆ ಯುವತಿ ಕೂಡ ಈತನ ಕೃತ್ಯಕ್ಕೆ ಪ್ರತಿರೋಧ ಒಡ್ಡಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಾಳೆ




