ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಟಗರು ಎಂದೇ ಖ್ಯಾತರಾರ ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಭಾನುವಾರ ಕೂಡ ಸಚಿವರು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ್ದ ಸಿಎಂ, ಪ್ರಾಸಿಕ್ಯೂಷನ್ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಿದ್ದಾರೆ.
ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದುಪಡಿಸುವಂತೆ ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.




