March 24, 2026

ಉಪ್ಪಿನಂಗಡಿ: ಮೊಬೈಲ್ ಕಿತ್ತುಕೊಂಡ ತಾಯಿ: ಕೋಪಗೊಂಡು ಆತ್ಮಹತ್ಯೆಗೆ ಶರಣಾದ ಬಾಲಕಿ

0
image_editor_output_image869612636-1724129422510

ಉಪ್ಪಿನಂಗಡಿ : ಅಪ್ರಾಪ್ತ ಬಾಲಕಿ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ನಡೆದಿದೆ.

ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ನೀಲಮ್‌ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಜಾರ್ಖಂಡ್ ನ‌ ಸರ್ಜು ಬುಯ್ಯಾನ್‌ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ನಿವಾಸಿಯೋರ್ವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ರವಿವಾರ ರಾತ್ರಿ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ನೀಲಮ್‌ ಕುಮಾರಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು ತಾಯಿ ಆಕ್ಷೇಪಿಸಿ ಮೊಬೈಲ್‌ ಕಿತ್ತುಕೊಂಡಿದ್ದರೆನ್ನಲಾಗಿದೆ. ಇದರಿಂದ ಕೋಪಿಸಿಕೊಂಡ ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!