ಮಂಜೇಶ್ವರ: ತೆಂಗಿನ ಗರಿ ಕೀಳಲು ಹೋದಾಗ ವಿದ್ಯುತ್ ಸ್ಪರ್ಶ: ಯುವಕ ಸಾವು
ಕಾಸರಗೋಡು: ಕರೆಂಟ್ ಶಾಕಿಗೆ ಒಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನ (kasaragod) ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಯಶವಂತ(21) ಕರೆಂಟ್ ಶಾಕಿಗೆ ಬಲಿಯಾದ ಯುವಕನಾಗಿದ್ದಾನೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ಯಶವಂತ ಹೋಗಿದ್ದರು. ಈ ವೇಳೆ ತೆಂಗಿನ ಗರಿ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿ ಯಶವಂತರಿಗೆ ಕರೆಂಟ್ ಶಾಕ್ ಹೊಡೆದಿದೆ. ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ಯಶವಂತ ಅಲ್ಲೇ ಕುಸಿದು ಮೃತಪಟ್ಟಿದ್ದಾರೆನ್ನಲಾಗಿದೆ.