July 13, 2026

ಮೂಡಿಗೆರೆ: ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಸಾವು

0
image_editor_output_image-1331002805-1724134226529.jpg

ಮೂಡಿಗೆರೆ: ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಸೋಮವಾರ ಸಂಜೆ ವಿವಾಹಿತ ಮಹಿಳೆ ಸುಬೀಕ್ಷಾ (26 ವರ್ಷ) ತನ್ನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಈ ಸಾವಿನ ಬಗ್ಗೆ ಆಕೆಯ ತವರು ಮನೆಯವರು ಅನುಮಾನ ವ್ಯಕ್ತಪಡಿಸಿ ಬಾಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೃತ ಸುಭೀಕ್ಷಾ ತಂದೆ ಚಿನ್ನೇಗೌಡ ತನ್ನ ಮಗಳಿಗೆ ಪತಿ, ಮಾವ ಮತ್ತು ಅತ್ತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು, ತನ್ನ ಮಗಳ ಸಾವಿನ ಬಗ್ಗೆ ಅನುಮಾನವಿದ್ದು ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!