July 13, 2026

ಬಂಟ್ವಾಳ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image-364342387-1724134473758.jpg

ಬಂಟ್ವಾಳ : ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ಸಂಭವಿಸಿದೆ.

ಇಲ್ಲಿನ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮುಂಜಾನೆ 5ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.
ಆತ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!