July 13, 2026

ಪುತ್ತೂರು: ಬಜರಂಗದಳದ ಕಾರ್ಯಕರ್ತ ನೇಣು ಬಿಗಿದು ಆತ್ಮಹತ್ಯೆ

0
image_editor_output_image-1189342266-1724165648769.jpg

ಪುತ್ತೂರು: ಬಜರಂಗದಳ ಕೆಯ್ಯರು ಘಟಕದ ಸುರಕ್ಷಾ ಪ್ರಮುಖ್‌ ಸಚಿನ್ ಯು(27ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಯ್ಯರು ಗ್ರಾಮದ ಉದ್ದಳೆ ನಿವಾಸಿಯಾಗಿರುವ ಕುಶಾಲಪ್ಪ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾಗಿರುವ ಸಚಿನ್ ಕೆಯೂರು ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ,

ಮೃತರು ತಂದೆ ತಾಯಿ, ಇಬ್ಬರು ಅಕ್ಕಂದಿರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!