ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನು ಕೊಲೆಗೈದು ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟ ಪತಿ
ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ಎರಡು ಮೂರು ದಿನಗಳ ಹಿಂದೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾವ್ಯ (27) ಮೃತ ಗೃಹಿಣಿ. ಈಕೆಯ ಶವ ಮನೆಯ ಬಾತ್‌ರೂಂನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.




