February 1, 2026

ಉಡುಪಿ: ಮನೆಯಲ್ಲಿ ಮೊಬೈಲ್ ಕೊಡಿಸದಕ್ಕೆ ಬಾವಿ ಹಾರಿದ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image386546122-1724217418754.jpg

ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆಬಿಟ್ಟು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾಗಿದೆ.

ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯಲ್ಲಿ ಮೃತ ವಿದ್ಯಾರ್ಥಿ ಶವ ಸಿಕ್ಕಿದೆ. ಮೃತರನ್ನು ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (16) ಎಂದು ಗುರುತಿಸಲಾಗಿದೆ. ಪ್ರಥಮೇಶ್ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಸೋಮವಾರ ಮೊಬೈಲ್ ಕೊಡದಿದ್ದಕ್ಕೆ ಜಗಳವಾಡಿ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ.

ಮಂಗಳವಾರ ಬೆಳಿಗ್ಗೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯೊಂದರಲ್ಲಿ ಪ್ರಥಮೇಶ್ ಮೃತದೇಹ ಪತ್ತೆಯಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!