February 2, 2026

ಕಾಸರಗೋಡು: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

0
image_editor_output_image-177344876-1724217732527.jpg

ಕಾಸರಗೋಡು: ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯ ಘಟನೆ ನಗರ ಹೊರವಲಯದ ಹಳೆ ಸೂರ್ಲು ವಿನ ಬಟ್ಟಂಪಾರೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಮೃತಪಟ್ಟವರು. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು.

ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಮೃತ ದೇಹವನ್ನು ಮೇಲಕ್ಕೆತ್ತಿದರು .

ಶರ್ಮಿಳಾರ ಪತಿ ಶಿವ ಅಮೈ ರಸ್ತೆ ಬಳಿಯ ಅಕೌಂಟೆಂಟ್ ಕಚೇರಿ ನಡೆಸುತ್ತಿದ್ದು ಇದೇ ಕಚೇರಿಯಲ್ಲಿ ಶರ್ಮಿಳಾ ಕೂಡಾ ಅಕೌಂಟೆಂಟ್ ಆಗಿ ದುಡಿಯುತ್ತಿದ್ದರು. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!