July 13, 2026

ಪ್ರಚೋದನಕಾರಿ ಭಾಷಣ: ಐವನ್ ಡಿಸೋಜಾ, ರಕ್ಷಿತ್ ಶಿವರಾಂ ವಿರುದ್ಧ ದೂರು ದಾಖಲು

0
image_editor_output_image93226742-1724224434745.jpg

ಮಂಗಳೂರು: ಮಂಗಳೂರಿನಲ್ಲಿ ಸೋಮವಾರ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನ ಲಾಲ್ಬಾಗ್‌ನಲ್ಲಿ ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ರಾಜ್ಯಪಾಲರ ವಿರುದ್ಧ ಪ್ರಚೋದನಕಾರಿ ಹಾಗೂ ದಂಗೆ ಎಬ್ಬಿಸುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದು ಇದರ ವಿರುದ್ಧ ಅಖಿಲೇಶ್ ಎಂಬವರು ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ಅದರಂತೆ ಬರ್ಕೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಕಡೆ ಅದೇ ದಿನ ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಗ್ರೆಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಈ ಬಗ್ಗೆ ದೂರು ನೀಡಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!