February 3, 2026

ಕಾರಿಗೆ ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

0
image_editor_output_image-843639085-1724307701361.jpg

ಬೆಂಗಳೂರು: ಕಾರಿಗೆ ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ಮಹೇಶ್ (21) ಹತ್ಯೆಯಾದ ಯುವಕ. ಕೊಲೆಯಾದ ಮಹೇಶ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಬುಧವಾರ ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಜಿಕೆವಿಕೆ ಬಳಿ ಬೈಕ್‍ನಲ್ಲಿ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಆತನ ಬೈಕ್ ಕಾರೊಂದಕ್ಕೆ ತಾಗಿದೆ. ಈ ವೇಳೆ ಕಾರಿನಲ್ಲಿದ್ದ ಅರವಿಂದ್ ಹಾಗೂ ಕೇಶವ್ ಎಂಬವರು ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಹತ್ಯೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!