February 2, 2026

ಬಂಟ್ವಾಳ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಬಿರುಸುಗೊಂಡ ರಾಜಕೀಯ ಚಟುವಟಿಕೆ

0
image_editor_output_image71169189-1724309406556.jpg

ಬಂಟ್ವಾಳ: ಪುರಸಭಾ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಎಸ್ಡಿಪಿಐ ತಂತ್ರಗಾರಿಕೆ ಶುರುಮಾಡಿದೆ.

ಮೂರು ಪಕ್ಷಗಳಲ್ಲಿ ಬಹುಮತಗಳು ಇಲ್ಲ. ಇಲ್ಲಿ ಈ ಬಾರಿ ಎಸ್ಡಿಪಿಐಯೇ ಕಿಂಗ್ ಮೇಕರ್ ಆಗಿದೆ. ಬಿರುಸಿನ ಚಟುವಟಿಕೆಗಳು ನಡೆಯುತ್ತಿದೆ. ಪುರಸಭಾ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿಯಿಂದ ಹಿರಿಯ ಸದಸ್ಯರಾದ ಎ.ಗೋವಿಂದ ಪ್ರಭು, ಕಾಂಗ್ರೆಸ್ ನಿಂದ ವಾಸು ಪೂಜಾರಿ ಲೊರೆಟ್ಟೊ ಹಾಗೂ ಎಸ್.ಡಿ.ಪಿ.ಪಕ್ಷದ ಇಂದ್ರೀಶ್ ಪಾಣೆಮಂಗಳೂರು ಅವರು ನಾಮಪತ್ರ ಸಲ್ಲಿಸಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಹರಿಪ್ರಸಾದ್ ಹಾಗೂ ಎಸ್‌ಡಿ.ಪಿ.ಐ.ಪಕ್ಷದಿಂದ ಮೋನಿಸ್ ಆಲಿ ಅವರು ನಾಮಪತ್ರ ಸಲಿಸಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯನ್ನು ಸೂಚಿಸದೆ ಅಚ್ಚರಿ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!