ಫೇಸ್‌ಬುಕ್ ಅಪರಿಚಿತ ಯುವತಿಯೊಂದಿಗೆ ಚಾಟ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ಅರ್ಚಕ
ಮಂಡ್ಯ : ಸಾಮಾಜಿಕ ಜಾಲ ತಾಣ ಫೇಸ್‌ಬುಕ್ ನಲ್ಲಿನ ಸುಂದರಿಯ ಮೋಹದ ಜಾಲಕ್ಕೆ ಬಿದ್ದ ಅರ್ಚಕನೋರ್ವ ಲಕ್ಷ ಲಕ್ಷ ಕಳಕೊಂಡ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್ ಹಣ ಕಳೆದುಕೊಂಡವರಾಗಿದ್ದು ಇದೀಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್, ಕುಟುಂಬದಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದರು. ಇವರಿಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಸಿರಿ ಶ್ರೇಷ ಸರಿತಾ ಎಂಬ ಸುಂದರಿಯ ಪರಿಚಯವಾಗಿದೆ.




