February 2, 2026

ಕಾಸರಗೋಡು: ಬೈಕ್ ಮತ್ತು ಕಾರು ಅಪಘಾತ: ಸವಾರ ಅಹಮ್ಮದ್ ಕಬೀರ್ ಮೃತ್ಯು

0
image_editor_output_image1554322425-1724345358206

ಕಾಸರಗೋಡು: ಬೈಕ್ ಮತ್ತು ಕಾರು ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ.

ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಮೃತಪಟ್ಟವರು. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ.

ಗಂಭೀರ ಗಾಯಗೊಂಡ ಕಬೀರ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು .

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ರಿಸ ಲಾಗಿದ್ದು ,ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!