ರಾಮನಗರ: ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.
ವಾಸುಕಿ (25) ಆತ್ಮಹತ್ಯೆ ಮಾಡಿಕೊಂಡ ವಕೀಲೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆ ವಾಸುಕಿ, ಗುರುವಾರ (ಆ.22) ಸಂಜೆ ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.