November 21, 2024

ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸಾವನ್ನಪ್ಪಿದ ಆರೋಪಿ

0

ದಿಸ್ಪುರ್: ಅಸ್ಸಾಂನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶನಿವಾರ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾಗಾಂವ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾದ ತಫಾಜುಲ್ ಇಸ್ಲಾಂನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದರು. ಅದರಂತೆ ಹೆಚ್ಚಿನ ತನಿಖೆಗಾಗಿ ಆತನನ್ನು ಶನಿವಾರ ಜಾವ 4 ಗಂಟೆಗೆ ಅಪರಾಧ ಎಸಗಿದ ಸ್ಥಳಕ್ಕೆ ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಅಲ್ಲೇ ಇದ್ದ ಕೆರೆಗೆ ಹಾರಿದ್ದಾನೆ.

ಸರಿಯಾಗಿ ಈಜು ಬಾರದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಮರುಳುಗಿ ಮೃತಪಟ್ಟಿದ್ದು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ನೀರಿನಿಂದ ಮೇಲಕ್ಕೆತ್ತಲಾಯಿತಾದರೂ ಅಷ್ಟೋತ್ತಿಗಾಗಲೇ ಆತ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!