ಕಡಬದ ತಾಲೂಕು ಆಡಳಿತ ಸೌಧಕ್ಕೆ ಲೋಕಾಯುಕ್ತ ರೈಡ್: ದಾಖಲೆಗಳ ಪರಿಶೀಲನೆ
ಕಡಬ: ಕಡಬದ ತಾಲೂಕು ಆಡಳಿತ ಸೌಧಕ್ಕೆ ಲೋಕಾಯುಕ್ತ ಎಸ್‌ಪಿ ನಟರಾಜ್ ದಿಢೀರ್ ಬೇಟಿ ನೀಡಿ ಕಚೇರಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಸಿಬ್ಬಂದಿಗಳು ಲಾಗಿನ್ ಸಮಯದಲ್ಲಿ ತಮ್ಮಲ್ಲಿರುವ ಕ್ಯಾಶ್ ಲೆಕ್ಕ ಬರೆದಿಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿ ನಿತ್ಯ ಕಚೇರಿಗೆ ಬರುವಾಗ ಮತ್ತು ಕಚೇರಿಯಿಂದ ಹೋಗುವಾಗ ಕ್ಯಾಶ್ ರಿಜಿಸ್ಟರ್ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಕ್ಯಾಶ್ ರಿಜಿಸ್ಟರ್ ಮಾಡಲು ಪುಸ್ತಕ ಇದ್ರೂ ಖಾಲಿ ಇರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನು ಇದೆ ವೇಳೆ ಅರ್ಹ ಬಿಪಿಎಲ್ ಕಾರ್ಡ್ ಬಳಕೆದಾರರನ್ನು ಗುರುತಿಸಿ ಉಳಿದವರ ಕಾರ್ಡ್ ಅನರ್ಹಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಐಶಾರಾಮಿ ಕಾರಿನಲ್ಲಿ ಓಡಾಡುವವರು ಕೂಡಾ ಬಿಪಿಎಲ್ ಕಾರ್ಡ್ ಹೊಂದಿರುವ ಕಾರಣ ಅರ್ಹರಿಗೆ ವಂಚನೆ ಆಗುತ್ತಿದೆ ಎಂದು ಅಧಿಕಾರಿಗಳ ಗಮನ ಸೆಳೆದಿದ್ದಾರೆ.
ತಾಲೂಕು ಕಚೇರಿಯಲ್ಲಿ ಜನರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜನರು ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಎಸ್‌ಪಿ ನಟರಾಜ್ ಜನರನ್ನು ವಿನಾ ಕಾರಣ ಕಚೇರಿಗಳಿಗೆ ಅಲೆದಾಡಿಸಿದ್ರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಈ ವೇಳೆ ಎಚ್ಚರಿಕೆ ಕೂಡಾ ನೀಡಿದ್ದಾರೆ.





