July 6, 2026

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿಗಳಿಗೆ 4 ದಿನ ಪೊಲೀಸ್ ಕಸ್ಟಡಿ

0
image_editor_output_image-2078052707-1724572755591

ಉಡುಪಿ: ಇತ್ತೀಚೆಗೆ ವರದಿಯಾಗಿದ್ದ ಕಾರ್ಕಳದಲ್ಲಿನ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ಬಗ್ಗೆ ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ , ಪ್ರಮುಖ ಆರೋಪಿಗಳಾದ ಅಲ್ತಾಫ್, ರಿಚರ್ಡ್ನನ್ನು ಪೊಲೀಸ್ ಕಸ್ಟಡಿಗೆ ಕಾರ್ಕಳ ನಗರಠಾಣೆ ಪೊಲೀಸರು ಕೇಳಿದ್ದರು. ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.

ಸಂತ್ರಸ್ತ ಯುವತಿಗೆ ಇನ್‌ಸ್ಟಾಗ್ರಾಂ ಮೂಲಕ ಅಲ್ತಾಫ್ ಪರಿಚಯವಾಗಿದ್ದ. ನಂತರ ಯುವತಿಯನ್ನು ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಸ್ನೇಹಿತರನ್ನು ಕರೆಸಿ ಬಿಯರ್ ‌ಅದರಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿವೆ.

Leave a Reply

Your email address will not be published. Required fields are marked *

You may have missed

error: Content is protected !!