ಜೈಲ್ ನಲ್ಲಿ ದರ್ಶನ್ ಫೋಟೋ ವೈರಲ್: ಏಳು ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು: ನಟ ದರ್ಶನ್ ಅವರು ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಹಿನ್ನೆಲೆ ಜೈಲಿನ ಏಳು ಅಧಿಕಾರಿಗಳನ್ನು ಗೃಹ ಸಚಿವ ಪರಮೇಶ್ವರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಜೈಲರ್ ಗಳಾದ ಶರಣಬಸವ ಅಮೀನ್ ಗಢ, ಖಂಡೇವಾಲ್, ಸಹಾಯಕ ಜೈಲರ್ ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ಜೈಲಿನ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್, ವಾರ್ಡರ್ ಬಸಪ್ಪ ಅವರನ್ನು ಅಮಾನತುಗೊಂಡವರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.
‘ಫೋಟೋ ಯಾರು ತೆಗೆದರು? ಯಾರ ಮೊಬೈಲ್ ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.




