ಪ್ರೀತಿಗೆ ಪೋಷಕರ ವಿರೋಧ: ಮನನೊಂದು ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ
ತಮಿಳುನಾಡು : ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಬ್ಬರಿಗೊಬ್ಬರು ತಬ್ಬಿಕೊಂಡು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ.
ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚನಪ್ಪಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ನರಸಿಂಹಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಯುವಶ್ರೀ ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನರಸಿಂಹ ಮೂರ್ತಿ ಹಾಗೂ ಯುವಶ್ರೀ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಇವರ ಪ್ರೀತಿಗೆ ಯುವಶ್ರೀ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ನರಸಿಂಹಮೂರ್ತಿ ಯುವಶ್ರೀಗೆ ಕಿರುಕುಳ ನೀಡುತ್ತಿದ್ದಾನೆಂದು ಯುವಶ್ರೀ ಪೋಷಕರು ಕಳೆದ ತಿಂಗಳು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.




